Tv9 Education Summit 2025: ಪರೀಕ್ಷೆಯ ನಂತರ ಗೊಂದಲ ಬೇಡ, ಸರಿಯಾದ ಕೋರ್ಸ್ ಆಯ್ಕೆ ಹೇಗೆ? ಇಲ್ಲಿದೆ ಮಾಹಿತಿ
ಪಿಯು ಪರೀಕ್ಷೆ ಮುಗಿದಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಕೂಡ ಮುಕ್ತಾಯಗೊಂಡಿದೆ. ವಿದ್ಯಾರ್ಥಿಗಳು ಮುಂದಿನ ಕೋರ್ಸ್ ಮತ್ತು ಭವಿಷ್ಯದ ಬಗ್ಗೆ ಗೊಂದಲದಲ್ಲಿದ್ದಾರೆ. ಟಿವಿ9 ಎಜುಕೇಶನ್ ಎಕ್ಸ್ಪೋ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಪರಿಹಾರ ನೀಡಲಿದೆ. ಈ ಮೇಳದಲ್ಲಿನ ಪ್ರಮುಖ ಅಂಶಗಳನ್ನು ಈ ಸುದ್ದಿಯಲ್ಲಿ ನೀಡಲಾಗಿದೆ.
ಬೆಂಗಳೂರು, ಏಪ್ರಿಲ್ 06: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ನಾವು ಮುಂದೆ ಯಾವ ಕೋರ್ಸ್ಗಳನ್ನು ತೆಗೆದುಕೊಳ್ಳಬೇಕೆಂಬ ಗೊಂದಲವಿರುತ್ತದೆ. ಕೆಲವರು ಫಲಿತಾಂಶ ಬಂದ ಬಳಿಕ ನೋಡೋಣ ಎಂದು ಯೋಚಿಸಿದರೆ ಇನ್ನೂ ಕೆಲವರು ತಮಗೆ ಇಷ್ಟೇ ಫಲಿತಾಂಶ ಬರುತ್ತದೆ ಮುಂದೇನು ಮಾಡಬೇಕೆಂದು ಮೊದಲೇ ಆಲೋಚಿಸುತ್ತಾರೆ.
ಮುಂದೆ ಯಾವ ಕೋರ್ಸ್ ಅನ್ನು ಆಯ್ಕೆ ಮಾಡಬೇಕು, ಯಾವ ವೃತ್ತಿಯನ್ನು ಆರಿಸಿಕೊಳ್ಳಬೇಕು ಎಂಬುದರ ಬಗ್ಗೆ ಅನಿಶ್ಚಿತತೆ ಅವರನ್ನು ಕಾಡುತ್ತಿದೆ. ಈ ಗೊಂದಲವನ್ನು ನಿವಾರಿಸಲು ಟಿವಿ9 ಎಜುಕೇಶನ್ ಎಕ್ಸ್ಪೋ ಒಂದು ಅತ್ಯುತ್ತಮ ವೇದಿಕೆಯಾಗಿದೆ. ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಮೇಳದಲ್ಲಿ ಭಾಗವಹಿಸಿ, ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ಕೋರ್ಸ್‌ಗಳ ಕುರಿತು ಮಾಹಿತಿ ಪಡೆದಿದ್ದಾರೆ.
ಕೌನ್ಸೆಲಿಂಗ್ ಅವಕಾಶಗಳನ್ನು ಒದಗಿಸುವ ಮೂಲಕ, ಟಿವಿ9 ಎಜುಕೇಶನ್ ಎಕ್ಸ್ಪೋ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಭವಿಷ್ಯವನ್ನು ರೂಪಿಸಲು ಸಹಾಯ ಮಾಡಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಈ ಮೇಳವು ಒಂದು ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಹೇಳಬಹುದು. ಈ ಮೇಳದಲ್ಲಿ ವಿವಿಧ ವೃತ್ತಿಪರ ಮಾರ್ಗದರ್ಶನಗಳು, ಶಿಕ್ಷಣ ಸಾಲದ ಮಾಹಿತಿ ಮತ್ತು ಇನ್ನಿತರ ಅನೇಕ ಅಗತ್ಯ ಮಾಹಿತಿಗಳು ಲಭ್ಯವಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
