TV9 Festival of India: ನವರಾತ್ರಿಯ ಮಹಾಗೌರಿ ಪೂಜೆಯಲ್ಲಿ ಬರುಣ್ ದಾಸ್ ಭಾಗಿ

Updated on: Sep 29, 2025 | 3:01 PM

ನವದೆಹಲಿಯ ಇಂಡಿಯಾ ಗೇಟ್​​​ನಲ್ಲಿರುವ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆಯಿಂದ ಅಕ್ಟೋಬರ್ 2ರವರೆಗೆ ಮೂರನೇ ಆವೃತ್ತಿಯ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ಸಾಂಸ್ಕೃತಿಕ ಉತ್ಸವ ನಡೆಯುತ್ತಿದೆ. ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದ್ದಾರೆ. ಇಂದು ನವರಾತ್ರಿಯ ಮಹಾಗೌರಿ ಪೂಜೆಯಲ್ಲಿ ಬರುಣ್ ದಾಸ್ ಭಾಗವಹಿಸಿದ್ದರು.

ದೆಹಲಿ, ಸೆಪ್ಟೆಂಬರ್​ 29: ನವರಾತ್ರಿ ಪ್ರಯುಕ್ತ ಆಯೋಜಿಸಿರುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ (tv9 Festival Of India) ಮೂರನೇ ಆವೃತ್ತಿಗೆ ಭಾನುವಾರದಂದು ಅದ್ದೂರಿ ಚಾಲನೆ ಸಿಕ್ಕಿದೆ. ನವದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಇಂದು ನವರಾತ್ರಿಯ ಮಹಾಗೌರಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್​ ಸೇರಿದಂತೆ ಹಲವರು ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More