AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ!

ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ!

ಭಾವನಾ ಹೆಗಡೆ
|

Updated on: Jul 04, 2026 | 10:12 AM

Share

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣ ವಂಚಿಸಿದ್ದ ಗ್ಯಾಂಗ್ ಅನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಟಿವಿ9 ವಾಹಿನಿಯು ಈ ಖದೀಮರ ವಂಚನೆಯ ಕುರಿತು ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆಗಿಳಿದು ಪ್ರಮುಖ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು, ಜುಲೈ 04: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣ ವಂಚಿಸಿದ್ದ ಗ್ಯಾಂಗ್ ಅನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಟಿವಿ9 ವಾಹಿನಿಯು ಈ ಖದೀಮರ ವಂಚನೆಯ ಕುರಿತು ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆಗಿಳಿದು ಪ್ರಮುಖ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಸಚಿನ್ ಮತ್ತು ಸುಜಾತಾ ಎಂಬ ದಂಪತಿ ಈ ವಂಚನೆ ಜಾಲದ ಮುಖ್ಯಸ್ಥರಾಗಿದ್ದು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಜನರನ್ನು ಟಾರ್ಗೆಟ್ ಮಾಡಿದ್ದರು. ಎಫ್‌ಡಿಸಿ, ಎಸ್‌ಡಿಸಿ, ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗಳಲ್ಲಿ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಜನರಿಂದ ಸುಮಾರು 1.2 ಕೋಟಿ ರೂಪಾಯಿ ವಸೂಲಿ ಮಾಡಿದ್ದರು. ಪ್ರತಿ ಉದ್ಯೋಗಾಕಾಂಕ್ಷಿಯಿಂದ 3.5 ಲಕ್ಷ ರೂಪಾಯಿ ಪಡೆದು ನಕಲಿ ದಾಖಲೆಪತ್ರಗಳು, ಐಡಿ ಕಾರ್ಡ್‌ಗಳು ಮತ್ತು ನೇಮಕಾತಿ ಪತ್ರಗಳನ್ನು ನೀಡಿದ್ದರು. ನಕಲಿ ದಾಖಲೆಗಳನ್ನು ಮುದ್ರಿಸಲು ದುರ್ಗಿಗುಡಿಯ ಶ್ರೀಸಾಯಿ ಆಫ್‌ಸೆಟ್ ಪ್ರಿಂಟರ್ಸ್‌ ಅನ್ನು ಬಳಸಿಕೊಳ್ಳಲಾಗಿತ್ತು. ಟಿವಿ9 ವರದಿ ಪ್ರಸಾರವಾದ ನಂತರ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಸಚಿನ್ ಮತ್ತು ಸುಜಾತಾ ಅವರನ್ನು ಬಂಧಿಸಿದ್ದಾರೆ.  ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us