ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

Edited By:

Updated on: Aug 10, 2026 | 7:36 PM

ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ

ಬೆಂಗಳೂರು, (ಆಗಸ್ಟ್ 10): ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H ಇಂಡಸ್ಟ್ರೀಸ್, ಮೆ.ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ.ಹಿಮಾಲಯ ಕೈಗಾರಿಕೆಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಚ್ಚುವ ಆದೇಶ (ಕ್ಲೋಷರ್ ಆರ್ಡರ್) ಹೊರಡಿಸಿ, ಅನುಸರಣಾ ವರದಿಯನ್ನು 24 ಗಂಟೆಯೊಳಗಾಗಿ ಈ ಕಚೇರಿಗೆ ಸಲ್ಲಿಸಲು ಸೂಚಿಸಿದ್ದಾರೆ. ಹುಮ್ನಾಬಾದ್ ನ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಿಂದ ಗುರುಗಂಗಾ ಹಳ್ಳಕ್ಕೆ ಕೆಮಿಕಲ್ ಬಿಡಲಾಗುತ್ತಿತ್ತು. ಪ್ರತಿದಿನವೂ ಸಾವಿರಾರು ಲೀಟರ್ ಕೆಮಿಕಲ್ ಕಾರ್ಖಾನೆ ತ್ಯಾಜ್ಯ ಹಳ್ಳಕ್ಕೆ ಸೇರುತ್ತಿತ್ತು. ಇದರಿಂದ ಜಲಚರಗಳು ಪ್ರಾಣಿಗಳು ಮಾರಣಹೋಮಕ್ಕೆ ಕಾರಣವಾಗಿತ್ತು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 10, 2026 07:21 PM
Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More