ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.
ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.
ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ ನೀರನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಕಾರ್ಖಾನೆಗಳು ಮೋಟರ್ ಗಳ ಮೂಲಕ ಅನಧಿಕೃತವಾಗಿ ನೀರು ತಗೆದುಕೊಳ್ಳುತ್ತಿದ್ದವು. ಈ ಸಂಬಂಧ ಕಳೆದ ಎರಡು ದಿನಗಳ ಹಿಂದೆ ಟಿವಿ9 ವಿಸ್ತ್ರತ ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ನೀರಾವರಿ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳಿಗೆ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿಸಿದ್ದಾರೆ.
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

