TV9 Kannada Digital Live: ವಿಧಾನ ಪರಿಷತ್ ಚುನಾವಣೆ: ರಾಜ್ಯದಲ್ಲಿ ಪರಿಷತ್ ಫೈಟ್ ಜನರಿಗೇನು ಲಾಭ? ವೀಕ್ಷಿಸಿ ಲೈವ್
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಚುನಾವಣೆಯ ಮೂಲಕ ಮೂರು ಪಕ್ಷಗಳು ಯಾವ ರೀತಿಯ ರಾಜಕೀಯ ಲಾಭ ಪಡೆಯಲು ಲೆಕ್ಕಾಚಾರ ಹಾಕಿವೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ವಿಧಾನ ಪರಿಷತ್ನ ( Vidhan Parishad Election 2022) ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೇ 19ರಂದು ಪರಿಷತ್ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನವಾಗಿದ್ದು, ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಚುನಾವಣೆಯ ಮೂಲಕ ಮೂರು ಪಕ್ಷಗಳು ಯಾವ ರೀತಿಯ ರಾಜಕೀಯ ಲಾಭ ಪಡೆಯಲು ಲೆಕ್ಕಾಚಾರ ಹಾಕಿವೆ ಎಂದು ಕಾದು ನೋಡಬೇಕಿದೆ.
7 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಇಂದು (ಮೇ 24) ಬಿಜಿಪಿ ಅಭ್ಯರ್ಥಿಗಳ ಹೆಸರು (BJP Candidates Names) ಪ್ರಕಟವಾಗಿದೆ. ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಹೇಮಲತಾ ನಾಯಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಎಸ್.ಕೇಶವಪ್ರಸಾದ್ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಬಸವರಾಜ ಹೊರಟ್ಟಿಗೆ ಬಿಜೆಪಿ ಟಿಕೆಟ್ ಫೈನಲ್ ಮಾಡಿದೆ. ಈ ಮೂಲಕ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಾರಿ ನಿರಾಸೆ ಮೂಡಿದೆ.
ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಟಿ.ಎ ಶರವಣರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ಎರಡನೇ ಬಾರಿಗೆ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ಗೆ ಟಿಕೆಟ್ ನೀಡಿ ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಅಂತಿಮಗೊಳಿಸಿದೆ. ದಾವಣಗೆರೆ ಮೂಲದ ಅಬ್ದಲ್ ಜಬ್ಬಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾಗಿದ್ದಾರೆ. ಈ ಹಿಂದೆ ಕೂಡಾ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಇದನ್ನೂ ಓದಿ: ನಿರ್ಮಾಣ ಹಂತದ ರಾಜಕಾಲುವೆ ಸ್ಲ್ಯಾಬ್ ಬಿದ್ದು ನಾಲ್ಕು ಕಾರ್ಮಿಕರಿಗೆ ಗಾಯ | KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಹಲ್ಲೆ
ಇದನ್ನೂ ಓದಿ: Art Of Yoga: ದೇಹಕ್ಕೆ ಹೊಸ ಚೈತನ್ಯ ತುಂಬುವ ಯೋಗ, ಪ್ರಾಣಾಯಾಮದ ಮಹತ್ವದ ಬಗ್ಗೆ ತಿಳಿಯಿರಿ