Sumalatha Ambareesh BJP Join Live: ಸುಮಲತಾ, ಕ್ರಿಕೆಟಿಗ ದೊಡ್ಡ ಗಣೇಶ, ​ಬಿಜೆಪಿ ಸೇರ್ಪಡೆ

|

Updated on: Apr 05, 2024 | 12:36 PM

ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಕಮಲ ಹಿಡಿದಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ ಅಂಬರೀಶ್​ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂ ಪಕ್ಷೇತರವಾಗಿ ಸ್ಪರ್ಧಿಸಿ ಪ್ರಚಂಡ ಬಹುಮತದಿಂದ ಸಂಸದೆ ಸುಮಲತಾ ಅಂಬರೀಶ್​ ವಿಜಯಶಾಲಿಯಾಗಿದ್ದರು. ಮುಂದೆ ಅವರು 2023 ವಿಧಾನಸಭೇ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಮಂಡ್ಯದಿಂದ ಸ್ಪರ್ಧಿಸಲು ಪ್ರಬಲ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಬದಲಾದ ರಾಜಕೀಯ ವಿದ್ಯಮಾನದಿಂದ ಸಂಸದೆ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ಕೈ ತಪ್ಪಿದೆ. ಎನ್​ಡಿಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬೇಸರಗೊಂಡಿದ್ದ ಮಂಡ್ಯದ ಸೊಸೆ ಸುಮಲತಾ ಅಂಬರೀಶ ರಾಜಕೀಯ ಚಟುವಟಿಕೆಗಳಿಂದ ಕೆಲವು ದಿನಗಳು ದೂರ ಉಳಿದಿದ್ದರು. ಆದರೆ ಬುಧವಾರ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಅವರು, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಮಲ ಹಿಡಿಯಲಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ ಅಂಬರೀಶ್​ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

Published on: Apr 05, 2024 12:21 PM