TV9 Kannada News Live: ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರ ರಚನೆ ಕಸರತ್ತು; ನೇರ ಪ್ರಸಾರ

Edited By:

Updated on: May 05, 2026 | 1:00 PM

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಸರಳ ಬಹುಮತದ ಸನಿಹದಲ್ಲಿದೆ. ಇದೀಗ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಯ ಕಸರತ್ತು ಜೋರಾಗಿದ್ದು, ರಾಜಕೀಯ ಬೆಳವಣಿಗೆಗಳ ನೇರ ಪ್ರಸಾರ ಇಲ್ಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ, ಕೇರಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದೆ. ಮತ್ತೊಂದೆಡೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬಹುಮತ ಗಳಿಸಿದ್ದರೆ, ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಸರಳ ಬಹುಮತಕ್ಕೆ ಸನಿಹದಲ್ಲಿದೆ. ಸದ್ಯ ಟಿವಿಕೆ 107 ಸ್ಥಾನ ಗಳಿಸಿದ್ದು, ಸರ್ಕಾರ ರಚನೆಗೆ 11 ಸದಸ್ಯರ ಬೆಂಬಲ ಟಿವಿಕೆಗೆ ಅಗತ್ಯವಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯ ವಿದ್ಯಮಾನಗಳ ಮತ್ತು ಸರ್ಕಾರ ರಚನೆ ಕಸರತ್ತಿನ ನೇರ ಪ್ರಸಾರ ಇಲ್ಲಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 05, 2026 12:54 PM
Follow Us