TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮತ್ತು ನಿಶ್ಚಿತ ಠೇವಣಿ ಮಾಡಿಸುವುದು ನನ್ನ ಮೇಲಿನ ಜವಾಬ್ದಾರಿಯಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್

TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮತ್ತು ನಿಶ್ಚಿತ ಠೇವಣಿ ಮಾಡಿಸುವುದು ನನ್ನ ಮೇಲಿನ ಜವಾಬ್ದಾರಿಯಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Sep 15, 2023 | 7:36 PM

TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದು ಮತ್ತು ಅವರ ಹೆಸರಲ್ಲಿ ರೂ. 3 ಲಕ್ಷ ಫಿಕ್ಸೆಡ್ ಡಿಪಾಸಿಟ್ ಮಾಡಿಸುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಅವುಗಳನ್ನು ಈಡೇರಿಸುವ ಭರವಸೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ ನಲ್ಲಿ ನೀಡಿದರು.

ಬೆಂಗಳೂರು: ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ 2023 ರಲ್ಲಿ (Kanasina Karunadu Karnataka Summit 2023) ಭಾಗವಹಿಸಿದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸರ್ಕಾರದ ಎಲ್ಲ ಯೋಜನೆಗಳು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ (Gruha Lakshmi) ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದರು. ಯೋಜನೆಗಳಿಂದ ಸರ್ಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಆಗೋದಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಒಬ್ಬ ಅತ್ಯುತ್ತಮ ಆರ್ಥಿಕ ತಜ್ಞರಾಗಿರುವುರಿಂದ, ಯೋಜನೆಗಳ ಅನುಷ್ಠಾನದ ಜೊತೆ ಅಭಿವೃದ್ಧಿ ಕೆಲಸಗಳನ್ನೂ ಸೂಕ್ತವಾಗಿ ಸರಿದೂಗಿಸಿಕೊಂಡು ಹೋಗುತ್ತಾರೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಯನ್ನು ಮುಂಬರುವ ದಿನಗಳಲ್ಲಿ ಖಂಡಿತವಾಗಿಯೂ ಈಡೇರಿಸಲಾಗುವುದು ಎಂದು ಅವರು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದು ಮತ್ತು ಅವರ ಹೆಸರಲ್ಲಿ ರೂ. 3 ಲಕ್ಷ ಫಿಕ್ಸೆಡ್ ಡಿಪಾಸಿಟ್ ಮಾಡಿಸುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಅವುಗಳನ್ನು ಈಡೇರಿಸುವ ಭರವಸೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ ಕಾರ್ಯಕ್ರಮದಲ್ಲಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 15, 2023 06:54 PM