AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ

ಸುಷ್ಮಾ ಚಕ್ರೆ
|

Updated on: Feb 14, 2026 | 9:01 PM

Share

TV9 ನವ ನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ರೋಹನ್ ಮಾಂತೆರೋ ಅವರಿಗೆ ಗೌರವ ಪ್ರಶಸ್ತಿ ನೀಡಲಾಗಿದೆ. ರೋಹನ್ ಕಾರ್ಪೊರೇಷನ್ ಮುಖ್ಯಸ್ಥ ರೋಹನ್ ಮಾಂಟೆರೋ ಅವರಿಗೆ TV9 ಸನ್ಮಾನ ಮಾಡಿದ್ದು, ಅವರ ಸೇವಾ ಕಾರ್ಯಗಳಿಗೆ ಮೆಚ್ಚುಗೆ ಸೂಚಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಹನೀಯರನ್ನು ಗೌರವಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ವರ್ಷದ ಸನ್ಮಾನಿತರಲ್ಲಿ ರೋಹನ್ ಕಾರ್ಪೊರೇಷನ್‌ನ ಸಂಸ್ಥಾಪಕ ರೋಹನ್ ಮಾಂಟೆರೋ ಅವರೂ ಒಬ್ಬರು.

ಬೆಂಗಳೂರು, ಫೆಬ್ರವರಿ 14: ರೋಹನ್ ಕಾರ್ಪೊರೇಷನ್‌ನ ರೋಹನ್ ಮಾಂಟೆರೋ ಅವರನ್ನು ಟಿವಿ9 ನವ ನಕ್ಷತ್ರ (TV9 Nava Nakshatra) ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ರೋಹನ್ ಅವರ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ಅವರ ಡಿವನ್ ಮೊಂಟೆರೋ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಹನ್ ಸನ್ಮಾನಿಸಿದರು. ರೋಹನ್ ಮೊಂಟೆರೋ ನಂಬಿಕೆ ಮತ್ತು ಗುಣಮಟ್ಟದ ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಸಮಾಜಮುಖಿ ಕಾರ್ಯಗಳಿಂದ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

TV9 ಕನ್ನಡ ಸುದ್ದಿವಾಹಿನಿಯು ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಹನೀಯರನ್ನು ಗೌರವಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ವರ್ಷದ ಸನ್ಮಾನಿತರಲ್ಲಿ ರೋಹನ್ ಕಾರ್ಪೊರೇಷನ್‌ನ ಸಂಸ್ಥಾಪಕ ರೋಹನ್ ಮಾಂಟೆರೋ ಅವರೂ ಒಬ್ಬರು.

ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಕೇವಲ ವ್ಯವಹಾರ ದೃಷ್ಟಿಯಿಂದ ಕಾರ್ಯನಿರ್ವಹಿಸದೆ, ನಂಬಿಕೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿದ ರೋಹನ್ ಮಾಂಟೆರೋ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಕಡು ಕಷ್ಟದಲ್ಲಿ ಬೆಳೆದು, ರೋಹನ್ ಕಾರ್ಪೊರೇಷನ್‌ನಂತಹ ದೊಡ್ಡ ಸಂಸ್ಥೆಯನ್ನು ನಿರ್ಮಿಸುವುದರ ಜೊತೆಗೆ, ಅವರು ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ