ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕನ್ನಡದ ಗಣೇಶೋತ್ಸವವು ಭಕ್ತಿ, ಸಂಭ್ರಮ ಮತ್ತು ಆಧ್ಯಾತ್ಮಿಕತೆಯ ಸಂಗಮವಾಗಿತ್ತು. ಟಿವಿ9 ಕನ್ನಡ ಸುದ್ದಿ ವಾಹಿನಿಯ ಕಚೇರಿಯಲ್ಲೂ ಗೌರಿ-ಗಣೇಶ ಹಬ್ಬದ ಆಚರಣೆ ಕಳೆಗಟ್ಟಿದ್ದು, ವಾಹಿನಿಯ ಮ್ಯಾನೇಜಿಂಗ್ ಎಡಿಟರ್ ರಾಹುಲ್ ಚೌಧರಿ ಅವರು ಗಣೇಶನಿಗೆ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವಿಡಿಯೋ ನೋಡಿ.
ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯಾದ್ಯಂತ ಗಣೇಶೋತ್ಸವದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ, ಇತ್ತ ಟಿವಿ9 ಕನ್ನಡ ಸುದ್ದಿ ವಾಹಿನಿ ಕಚೇರಿಯಲ್ಲೂ ಗೌರಿ-ಗಣೇಶ ಹಬ್ಬದ ಆಚರಣೆ ಕಳೆಗಟ್ಟಿದೆ. ವಾಹಿನಿಯ ಮ್ಯಾನೇಜಿಂಗ್ ಎಡಿಟರ್ ರಾಹುಲ್ ಚೌಧರಿ ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ವೇಳೆ ವಾಹಿನಿಯ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದು, ಭಕ್ತಿಭಾವದಿಂದ ಗಣಪನಿಗೆ ನಮಸ್ಕರಿಸಿದರು. ಇನ್ನು ವಿಸರ್ಜನೆಗೂ ಮುನ್ನ ಶಾಸ್ತ್ರೋಕ್ತವಾಗಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ವೇಳೆ ಸಿಬ್ಬಂದಿ ಗಣಪತಿಯ ಮುಂದೆ ಭರ್ಜರಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದು, ಬಳಿಕ ಅದ್ದೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 16, 2026 08:55 PM
Follow Us
Latest Videos
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ

