AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ

ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Nov 20, 2026 | 11:50 AM

Share

ಬೆಂಗಳೂರಿನಲ್ಲಿ ಮನೆ, ಸೈಟ್ ಅಥವಾ ವಿಲ್ಲಾ ಖರೀದಿಸುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್ಸ್‌ನಲ್ಲಿ ಬಹು ನಿರೀಕ್ಷಿತ ‘ಟಿವಿ9 ರಿಯಲ್ ಎಸ್ಟೇಟ್ ಎಕ್ಸ್‌ಪೋ’ಗೆ ಅದ್ದೂರಿ ಚಾಲನೆ ದೊರೆತಿದೆ. ನವೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯುವ ಎಕ್ಸ್‌ಪೋದಲ್ಲಿ ಅಪಾರ್ಟ್‌ಮೆಂಟ್, ವಿಲ್ಲಾ, ಪ್ಲಾಟ್, ಫಾರ್ಮ್‌ಲ್ಯಾಂಡ್ ಸೇರಿದಂತೆ ನೂರಾರು ಪ್ರಾಜೆಕ್ಟ್‌ಗಳನ್ನು ಒಂದೇ ಸೂರಿನಡಿ ವೀಕ್ಷಿಸಬಹುದು.

ಬೆಂಗಳೂರಿನಲ್ಲಿ ಸೈಟ್ ಅಥವಾ ಮನೆ ಖರೀದಿ ಮಾಡಬೇಕು ಎಂದು ಆಲೋಚನೆ ಮಾಡುತ್ತಿರುವವರಿಗೆ ಸಿಹಿ ಸುದ್ದಿ. ಬೆಂಗಳೂರಿನ ಅತಿದೊಡ್ಡ ರಿಯಲ್ ಎಸ್ಟೇಟ್ ಎಕ್ಸ್​ಪೋ ಎಂದೇ ಪರಿಗಣಿಸಲ್ಪಟ್ಟಿರುವ, ಬಹು ನಿರೀಕ್ಷಿತ ‘ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋ’ಗೆ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್ಸ್​​ನಲ್ಲಿ ಶುಕ್ರವಾರ ಚಾಲನೆ ದೊರೆತಿದೆ. ಇಂದಿನಿಂದ (ನವೆಂಬರ್ 20) 3 ದಿನಗಳ ಕಾಲ ಎಕ್ಸ್​ಪೋ ನಡೆಯಲಿದೆ. ಮನೆ ಕೊಳ್ಳುವ ಕನಸು ಕಾಣುತ್ತಿರುವವರಿಗೆ ಒಂದೇ ಸೂರಿನಡಿ ಅಪಾರ್ಟ್‌ಮೆಂಟ್, ವಿಲ್ಲಾ, ಪ್ಲಾಟ್, ಫಾರ್ಮ್‌ಲ್ಯಾಂಡ್ ಸೇರಿದಂತೆ ನೂರಾರು ಪ್ರಾಜೆಕ್ಟ್‌ಗಳನ್ನು ನೋಡುವ, ಪ್ರಮುಖ ಬಿಲ್ಡರ್‌ಗಳೊಂದಿಗೆ ನೇರವಾಗಿ ಮಾತನಾಡುವ, ಹೋಂ ಲೋನ್ ಸೌಲಭ್ಯ, ಕಾನೂನು ಮಾಹಿತಿ ಮತ್ತು ಎಕ್ಸ್​ಪೋಗೆ ಮಾತ್ರ ಸಿಗುವ ವಿಶೇಷ ಆಫರ್‌ಗಳು ಹಾಗೂ ಡಿಸ್ಕೌಂಟ್‌ಗಳನ್ನು ಪಡೆಯುವ ಅವಕಾಶ ಇಲ್ಲಿ ಸಿಗುತ್ತದೆ. ಹೊಸ ಮನೆ ಖರೀದಿ ಮಾಡಬೇಕು ಅಂದುಕೊಂಡವರಿಗೆ ಸರಿಯಾದ ಬಿಲ್ಡರ್ ಆಯ್ಕೆ ಮಾಡಲು, ಬೆಲೆ ಹೋಲಿಕೆ ಮಾಡಲು ಮತ್ತು ಎಲ್ಲಾ ಮಾಹಿತಿಯನ್ನು ಒಂದೇ ಜಾಗದಲ್ಲಿ ಪಡೆಯಲು ‘ಟಿವಿ9 ಸ್ವೀಟ್ ಹೋಮ್ ಎಕ್ಸ್​ಪೋ’ ಅತ್ಯುತ್ತಮ ವೇದಿಕೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More