ಧೂಳು ತಿನ್ನುತ್ತಿದ್ದ ಶೂಗಳು ಕೊನೆಗೂ ಮಕ್ಕಳ ಕಾಲಿಗೆ: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ

Edited By:

Updated on: Sep 23, 2026 | 10:32 AM

ಗದಗ ಜಿಲ್ಲೆಯ ನರಗುಂದ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆಯಲ್ಲಿ ವಿಳಂಬವಾಗಿತ್ತು. ಶೂಗಳಿದ್ದರೂ ಅವು ಕೊಠಡಿಗಳಲ್ಲಿ ಧೂಳು ತಿನ್ನುತ್ತಿದ್ದವು. ಟಿವಿ9 ಡಿಜಿಟಲ್ ಈ ಕುರಿತು ವಿಸ್ತೃತ ವರದಿ ಪ್ರಸಾರ ಮಾಡಿತು. ವರದಿ ಪ್ರಸಾರವಾದ ಎರಡು ದಿನಗಳಲ್ಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಎಲ್ಲ ಮಕ್ಕಳಿಗೆ ಶೂ ವಿತರಿಸಿದರು. ಇದರಿಂದ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿದೆ.

ಗದಗ, ಸೆ.22: ಜಿಲ್ಲೆಯ ನರಗುಂದ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆಯಲ್ಲಿ ನಡೆದ ವಿಳಂಬದ ಬಗ್ಗೆ ಟಿವಿ9 ಡಿಜಿಟಲ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಶಾಲೆಗಳು ಆರಂಭವಾಗಿ ನಾಲ್ಕು ತಿಂಗಳಾದರೂ ಮಕ್ಕಳಿಗೆ ಶೂ ಭಾಗ್ಯ ಸಿಕ್ಕಿರಲಿಲ್ಲ. ಸರ್ಕಾರವು ಶಾಲೆಗಳಿಗೆ ಪೂರೈಕೆ ಮಾಡಿದ್ದ ಶೂಗಳು ಕೊಠಡಿಗಳಲ್ಲಿ ಧೂಳು ತಿನ್ನುತ್ತಿದ್ದವು. ಬರಿಗಾಲಿನಲ್ಲಿ ನಡೆದು ಬರುವ ಮಕ್ಕಳು ಕಲ್ಲು, ಮುಳ್ಳು, ಬಿಸಿಲಿನಿಂದ ತೊಂದರೆ ಅನುಭವಿಸುತ್ತಿದ್ದರು. ಟಿವಿ9 ವರದಿ ಪ್ರಸಾರವಾದ ಬೆನ್ನಲ್ಲೇ ಗದಗ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡರು. ನರಗುಂದ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಎರಡು ದಿನಗಳೊಳಗಾಗಿ ಶೂ ವಿತರಿಸಿದರು. ಇದರಿಂದ ಮಕ್ಕಳ ಮುಖದಲ್ಲಿ ಸಂತಸ ಮೂಡಿದ್ದು, ಸಮವಸ್ತ್ರದ ಜೊತೆಗೆ ಶೂ ಧರಿಸಿ ಶಾಲೆಗೆ ಬರುತ್ತಿದ್ದಾರೆ. ಟಿವಿ9 ಡಿಜಿಟಲ್ ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಪೋಷಕರು ಕೂಡ ಧನ್ಯವಾದ ಅರ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 22, 2026 10:59 PM
Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More