‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ’: ಸಿಎಂ ಸಿದ್ದರಾಮಯ್ಯ
ಮುಡಾ ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ವಿಚಾರ. ಸದ್ಯ ಈ ಕುರಿತಾಗಿ ಟಿವಿ9 ಸೂಪರ್ ಎಕ್ಸ್ಕ್ಲ್ಯೂಸಿವ್ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ. ಇದು ರಾಜಕೀಯ ದ್ವೇಷ, ದುರುದ್ದೇಶವಾಗಿ ಆರೋಪ ಮಾಡಲಾಗಿದೆ ಎಂದಿದ್ದಾರೆ.
ಬೆಂಗಳೂರು, ಜುಲೈ 13: ಮುಡಾ (MUDA) ಸೈಟ್ ಹಂಚಿಕೆ ವಿವಾದದಲ್ಲಿ ಯಾವ ಹಗರಣ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಟಿವಿ9 ಸೂಪರ್ ಎಕ್ಸ್ಕ್ಲ್ಯೂಸಿವ್ ಸಂದರ್ಶನದಲ್ಲಿ ಮಾತನಾಡಿದ ಅವರು, ಮಾತು ಆರಂಭಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಇದೊಂದು ಪ್ರಕರಣವೇ ಅಲ್ಲ. ವಿಪಕ್ಷಗಳ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದು ರಾಜಕೀಯ ದ್ವೇಷ, ದುರುದ್ದೇಶವಾಗಿ ಆರೋಪ ಮಾಡಲಾಗುತ್ತಿದೆ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. ಇನ್ನು 1997ರಲ್ಲಿ ಮುಡಾ ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿರುವದರಿಂದ ಹಿಡಿದು ಭೂಮಿ ಖರೀದಿಸಿರುವವರೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.