AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Sweet Home Real Estate Expo: ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದಾಗಿದೆ

TV9 Sweet Home Real Estate Expo: ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದಾಗಿದೆ

ಭಾವನಾ ಹೆಗಡೆ
|

Updated on: Aug 21, 2026 | 11:22 AM

Share

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ ಇದೇ ಮೊದಲ ಬಾರಿಗೆ ಆಗಸ್ಟ್ 22 ಮತ್ತು 23 ರಂದು ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆಯಲಿದೆ. ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸಲು ಇದು ಸುವರ್ಣಾವಕಾಶ. ವಿಶ್ವಾಸಾರ್ಹ ಡೆವಲಪರ್‌ಗಳು, ಬಿಲ್ಡರ್‌ಗಳು ಮತ್ತು ಬ್ಯಾಂಕ್‌ಗಳಿಂದ ಸುಲಭ ಸಾಲ ಸೌಲಭ್ಯ ಲಭ್ಯ. ಪ್ರವೇಶ ಉಚಿತವಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಎಕ್ಸ್ಪೋ ತೆರೆದಿರುತ್ತದೆ.

ಮೈಸೂರು, ಆಗಸ್ಟ್ 21: ಮೈಸೂರಿನಲ್ಲಿ ದಸರಾಕ್ಕೂ ಮುನ್ನವೇ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ. ಹೌದು, ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜನೆಗೊಂಡಿದೆ. ಆಗಸ್ಟ್ 22 ಮತ್ತು 23 ರಂದು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ಸಮೀಪದ ರಾಜೇಂದ್ರ ಕಲಾಮಂದಿರದಲ್ಲಿ ಈ ಮಹತ್ವದ ಕಾರ್ಯಕ್ರಮ ನಡೆಯಲಿದೆ. ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸಲು ಇದು ಅತ್ಯುತ್ತಮ ಸುವರ್ಣಾವಕಾಶವಾಗಿದೆ. ಈ ಎಕ್ಸ್ಪೋದಲ್ಲಿ ವಿಶ್ವಾಸಾರ್ಹ ಡೆವಲಪರ್‌ಗಳು ಮತ್ತು ಬಿಲ್ಡರ್‌ಗಳು ತಮ್ಮ ಯೋಜನೆಗಳನ್ನು ಪ್ರದರ್ಶಿಸಲಿದ್ದಾರೆ. ಗ್ರಾಹಕರು ನೇರವಾಗಿ ಅವರನ್ನು ಭೇಟಿ ಮಾಡಿ, ತಮ್ಮ ಅಗತ್ಯಗಳಿಗೆ ತಕ್ಕಂತೆ ಮನೆ ಅಥವಾ ಆಸ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಇದಲ್ಲದೆ, ಪ್ರತಿಷ್ಠಿತ ಬ್ಯಾಂಕ್‌ಗಳಿಂದ ಸುಲಭ ಕಂತುಗಳಲ್ಲಿ ಗೃಹ ಸಾಲ ಸೌಲಭ್ಯವೂ ಕೂಡ ಈ ಎಕ್ಸ್ಪೋದಲ್ಲಿ ಲಭ್ಯವಾಗಲಿದೆ. ಆಸ್ತಿ ಖರೀದಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಇದು ಸಹಕಾರಿಯಾಗಿದೆ. ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೂ ಎಕ್ಸ್ಪೋಗೆ ಪ್ರವೇಶ ಉಚಿತವಾಗಿರುತ್ತದೆ. ಮೈಸೂರು ಮತ್ತು ಸುತ್ತಮುತ್ತಲಿನ ಆಸ್ತಿ ಹೂಡಿಕೆದಾರರು ಹಾಗೂ ಮನೆ ಖರೀದಿಸುವ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us