ತನ್ನದೇ ರ್ಯಾಲಿಯಲ್ಲಿ 31 ಜನ ಮೃತಪಟ್ಟರೂ ವಿಮಾನ ಹತ್ತಿ ಹೊರಟ ನಟ ವಿಜಯ್
ಇಂದು ತಮಿಳುನಾಡಿನ ಕರೂರಿನಲ್ಲಿ ನಡೆದ ವಿಜಯ್ ಅವರ ರಾಜಕೀಯ ರ್ಯಾಲಿಯು ಕಾಲ್ತುಳಿತದ ಘಟನೆಯಾಗಿ ಮಾರ್ಪಟ್ಟಿದ್ದು, ಇದರಲ್ಲಿ 31 ಜನರು ಸಾವನ್ನಪ್ಪಿದ್ದಾರೆ. ಕಾಲ್ತುಳಿತ ಘಟನೆಯಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡದಿದ್ದರೂ, ವಿರೋಧ ಪಕ್ಷದ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಅವರು ಹಲವಾರು ಜನರು ಸಾವನ್ನಪ್ಪಿರಬಹುದು ಎಂಬ ಸುಳಿವು ನೀಡಿದ್ದಾರೆ.
ಕರೂರ್, ಸೆಪ್ಟೆಂಬರ್ 27: ತಮಿಳುನಾಡಿನ (Tamil Nadu Rally) ಕರೂರ್ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 31 ಜನರು ಸಾವನ್ನಪ್ಪಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ನಟ ವಿಜಯ್ ತಿರುಚ್ಚಿ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿರುವ ವಿಡಿಯೋ ಸೆರೆಯಾಗಿದೆ. ಜನರು ಅವರನ್ನು ಮುತ್ತಿಕೊಳ್ಳಲು ಪ್ರಯತ್ನಿಸಿದರೂ ಅವರು ಕಾರಿನಿಂದ ಇಳಿದು ವಿಮಾನ ನಿಲ್ದಾಣದೊಳಗೆ ಹೋಗಿದ್ದಾರೆ. ಸಿಎಂ ಸ್ಟಾಲಿನ್, ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಕರೂರ್ ರ್ಯಾಲಿಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಂತಾಪ ಸೂಚಿಸಿದ್ದಾರೆ. ಆದರೆ, ವಿಜಯ್ ಇದುವರೆಗೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಗಾಯಾಳುಗಳನ್ನು ಭೇಟಿಯಾಗಲು ಆಸ್ಪತ್ರೆಗೂ ತೆರಳಿಲ್ಲ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

