ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್​​ ಕೈ ಹಿಡಿದ ಪಕ್ಷಗಳಾವುವು?

Edited By:

Updated on: May 08, 2026 | 5:53 PM

ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್‌ ನಂಬರ್‌ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು...ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್‌ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್‌ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಚೆನ್ನೈ, (ಮೇ 08): ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್‌ ನಂಬರ್‌ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು…ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್‌ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್‌ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ವಿಜಯ್ ಸರ್ಕಾರ ರಚನೆಗೆ ಕೊನೆ ಕ್ಷಣದಲ್ಲಿ ಬೆಂಬಲ ಘೋಷಿಸಿದ ಪಕ್ಷಗಳಾವುವು ಎನ್ನುವುದನ್ನು ನೋಡುವುದಾದರೆ, ಕಾಂಗ್ರೆಸ್ 5, ವಿಸಿಕೆ 2, ಸಿಪಿಐ 2, ಸಿಪಿಐಎಂ 2 ಮುಸ್ಲಿಂ ಲೀಗ್​​​ನ ಇಬ್ಬರು ಶಾಸಕರು ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಟಿವಿಕೆಯ 107 ಶಾಸಕರ ಜೊತೆಗೆ ಎಡಪಕ್ಷಗಳ ಬೆಂಬಲದೊದಿಗೆ ವಿಜಯ್ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚು ಅಂದರೆ 121 ಶಾಸಕರ ಬೆಂಬಲ ಸಿಕ್ಕಿದ್ದು, ಈ ಬೆಂಬಲ ಪತ್ರದೊಂದಿಗೆ ವಿಜಯ್ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ಇದರೊಂದಿಗೆ ಕಳೆದ ಮೂರು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ.

ಇದನ್ನೂ ನೋಡಿ: ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

 

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More