ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ

Updated on: May 04, 2026 | 6:03 PM

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ.

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು ತಕ್ಕ ಉತ್ತರ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More