Twitter New Logo: ಹಕ್ಕಿ ಹೋಯ್ತು, ಎಕ್ಸ್ ಬಂತು.. ಟ್ವಿಟರ್ ಹೊಸ ಲೋಗೊ ನೋಡಿ!

ಕಿರಣ್​ ಐಜಿ

Updated on: Jul 26, 2023 | 9:30 AM

ಎಲಾನ್ ಮಸ್ಕ್ ಈ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್​ನಲ್ಲಿ ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ಈ ಹಿಂದೆ ಟ್ವಿಟ್ಟರ್​ನಲ್ಲಿ ಹೊಸ ಫೀಚರ್​ಗಳನ್ನು ತಂದು ನೂತನ ರೂಪ ನೀಡಿದ್ದ ಮಸ್ಕ್ ಇದೀಗ ಅತಿ ದೊಡ್ಡ ಬದಲಾವಣೆ ಮಾಡಿದ್ದು, ಹೊಸ ಲೋಗೋ ಬಿಡುಗಡೆ ಮಾಡಿದ್ದಾರೆ.

ಜನಪ್ರಿಯ ಮೈಕ್ರೋಬ್ಲಾಗಿಂಗ್ ಮತ್ತು ಪ್ರಭಾವಶಾಲಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ಅನ್ನು ತೆಕ್ಕೆಗೆ ಪಡೆದುಕೊಂಡ ಬಳಿಕ ಎಲಾನ್ ಮಸ್ಕ್ ಈ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್​ನಲ್ಲಿ ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ಈ ಹಿಂದೆ ಟ್ವಿಟ್ಟರ್​ನಲ್ಲಿ ಹೊಸ ಫೀಚರ್​ಗಳನ್ನು ತಂದು ನೂತನ ರೂಪ ನೀಡಿದ್ದ ಮಸ್ಕ್ ಇದೀಗ ಅತಿ ದೊಡ್ಡ ಬದಲಾವಣೆ ಮಾಡಿದ್ದು, ಹೊಸ ಲೋಗೋ ಬಿಡುಗಡೆ ಮಾಡಿದ್ದಾರೆ. ಟ್ವಿಟ್ಟರ್​ನಲ್ಲಿ ಇದೀಗ ನೀಲಿ ಹಕ್ಕಿಯ ಲಾಂಛನದ ಬದಲಾಗಿ ಕಪ್ಪು ಅಕ್ಷರದಲ್ಲಿ ಎಕ್ಸ್ ಎಂದು ಬರೆದಿರುವ ಲೋಗೋ ಕಾಣಿಸುತ್ತಿದೆ. ಮಸ್ಕ್ ಭಾನುವಾರವಷ್ಟೆ, ಸದ್ಯದಲ್ಲೇ ಟ್ವಿಟ್ಟರ್ ಲೋಗೋ ಬದಲಾವಣೆ ಆಗಲಿದೆ ಎಂದು ಹೇಳಿದ್ದರು. ಬಳಿಕ ಒಂದೇ ದಿನದಲ್ಲಿ ನೂತನ ಲೋಗೋ ಬಿಡುಗಡೆ ಮಾಡಿರುವುದು ಬಳಕೆದಾರರಿಗೆ ಅಚ್ಚರಿ ಮೂಡಿಸಿದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.