ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಮುಂಗಾರು ಮಾನ್ಸೂನ್ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ.
ಚಿಕ್ಕಮಗಳೂರು, (ಮೇ.25): ಮುಂಗಾರು ಮಾನ್ಸೂನ್ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ. ಚಕಮಕ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳೀಯರು, ಹಗ್ಗದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.
Published on: May 25, 2025 01:42 PM