ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು

Edited By:

Updated on: Aug 19, 2026 | 12:23 PM

Bagalakote News: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿಯ ಜಂಬಗಿ ಕ್ರಾಸ್‌ನಲ್ಲಿ ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ವಿಜಯಪುರ ಮಾರ್ಗವಾಗಿ ಗೋವಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಹಾಗೂ ಬೈಕ್ ಸವಾರ ಸೇರಿದಂತೆ ಇಬ್ಬರು ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಬಾಗಲಕೋಟೆ, ಆಗಸ್ಟ್​​ 19: ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್​​ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More