ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಹನುಮಂತನಗರ ವ್ಯಾಪ್ತಿಯಲ್ಲಿ ಮಾರಾಮಾರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಾನೂನಿನ ಭಯವಿಲ್ಲದೆ ರೌಡಿಗಳ ಎರಡು ಗುಂಪುಗಳ ನಡುವೆ ಹನುಮಂತನಗರ ವ್ಯಾಪ್ತಿಯಲ್ಲಿ ಮಾರಾಮಾರಿ ನಡೆದಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಗಲಾಟೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.