AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್​​ ಹ್ಯಾಂಡ್​​ ಆಗಿ ಹಿಡಿದ ಖಾಕಿ

ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್​​ ಹ್ಯಾಂಡ್​​ ಆಗಿ ಹಿಡಿದ ಖಾಕಿ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 09, 2026 | 2:57 PM

Share

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಸಿಗರೇಟ್‌ನಲ್ಲಿ ಗಾಂಜಾ ಪುಡಿ ತುಂಬಿ ಸೇದುತ್ತಿದ್ದ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಕಲಂ 27ಬಿ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಮೂಲ ಹಾಗೂ ಪೆಡ್ಲರ್‌ಗಳ ಬಗ್ಗೆ ತನಿಖೆ ಮುಂದುವರಿದಿದೆ. ರಾಜ್ಯದಲ್ಲಿ ಡ್ರಗ್ಸ್ ಹಾವಳಿಯ ತೀವ್ರತೆಗೆ ಈ ಘಟನೆ ನಿದರ್ಶನವಾಗಿದೆ.

ಬೆಂಗಳೂರು, ಮಾರ್ಚ್​ 09: ಕಬ್ಬನ್​ಪಾರ್ಕ್​ನ ಶೌಚಾಲಯದ ಸಮೀಪ ಸಿಗರೇಟ್‌ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಫೋಟೋಗ್ರಾಫರ್​ಗಳಾದ ವಿ.ಸಚಿನ್(21), ಪವನ್ ಕಲ್ಯಾಣ್(22) ಬಂಧಿತರಾಗಿದ್ದು, ಫೋಟೋ ತೆಗೆಯುವ ಉದ್ದೇಶದಿಂದ ಇವರು ಪಾರ್ಕ್‌ಗೆ ಬಂದಿದ್ದರು. ಆದರೆ ಗಾಂಜಾ ಸೇದುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಕಬ್ಬನ್​ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢ ‌‌‌ಪಟ್ಟಿದೆ. ಈ ಹಿನ್ನೆಲೆ ಎನ್‌ಡಿಪಿಎಸ್‌ ಕಾಯ್ದೆ ಕಲಂ 27(ಬಿ) ಅನ್ವಯ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು, ಇವರು ಗಾಂಜಾ ಖರೀದಿಸಿದ್ದು ಎಲ್ಲಿ? ಪೆಡ್ಲರ್‌ಗಳು ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆಗಿಳಿದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us