AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಸುಷ್ಮಾ ಚಕ್ರೆ
|

Updated on:Jan 04, 2025 | 4:50 PM

Share

ಮಧ್ಯಪ್ರದೇಶದ ಪಿತಾಂಪುರದಲ್ಲಿ 337 ಟನ್ ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ವಿಲೇವಾರಿ ಮಾಡಲು ಯೋಜಿಸಿರುವುದನ್ನು ವಿರೋಧಿಸಿ ಬಂದ್ ಕರೆ ನೀಡಲಾಗಿದೆ. ಈ ನಡುವೆ ಇಬ್ಬರು ವ್ಯಕ್ತಿಗಳು ಬೆಂಕಿ ಹಚ್ಚಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಬೈಡ್ ತ್ಯಾಜ್ಯವನ್ನು ಯೋಜಿತವಾಗಿ ದಹಿಸುವುದರಿಂದ ಸ್ಥಳೀಯ ಜನರು ಮತ್ತು ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಹೇಳುವ ಪಿತಾಮ್‌ಪುರ ಬಚಾವೋ ಸಮಿತಿಯ ಬಂದ್ ಕರೆಯ ನಡುವೆ ಅಂಗಡಿಗಳು ಮತ್ತು ಮಾರುಕಟ್ಟೆಗಳು ಮುಚ್ಚಲ್ಪಟ್ಟವು.

ಪಿತಾಂಪುರ್: ಮಧ್ಯಪ್ರದೇಶದ ಪಿತಾಂಪುರದಲ್ಲಿ ತ್ಯಾಜ್ಯ ವಿಲೇವಾರಿಯ ವಿರುದ್ಧದ ಪ್ರತಿಭಟನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ದೇಹದ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಸುಮಾರು 40 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳನ್ನು ಇಂದೋರ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಪಿತಾಂಪುರದ ಆಸ್ಪತ್ರೆಗೆ ಸಾಗಿಸಲಾಯಿತು. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 04, 2025 04:36 PM
Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More