ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ

Updated on: Aug 26, 2026 | 11:14 PM

ಬಿಹಾರದ ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನದಿಯ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಮಗುಚಿದ ಭೀಕರ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯರ ಸಹಾಯದಿಂದ 19 ಜನರನ್ನು ರಕ್ಷಿಸಲಾಗಿದ್ದು, ಇಬ್ಬರು ಪ್ರಯಾಣಿಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ ಸಾಮರ್ಥ್ಯಕ್ಕೂ ಹೆಚ್ಚು, ಅಂದರೆ ಒಟ್ಟು 21 ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಈ ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, 19 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಪಾಟ್ನಾ, ಆಗಸ್ಟ್ 26: ಬಿಹಾರದ (Bihar) ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನದಿಯ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಮಗುಚಿದ ಭೀಕರ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯರ ಸಹಾಯದಿಂದ 19 ಜನರನ್ನು ರಕ್ಷಿಸಲಾಗಿದ್ದು, ಇಬ್ಬರು ಪ್ರಯಾಣಿಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ ಸಾಮರ್ಥ್ಯಕ್ಕೂ ಹೆಚ್ಚು, ಅಂದರೆ ಒಟ್ಟು 21 ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಈ ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, 19 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರಿಗಾಗಿ ಎನ್‌ಡಿಆರ್‌ಎಫ್ (NDRF) ಹಾಗೂ ಎಸ್‌ಡಿಆರ್‌ಎಫ್ (SDRF) ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಮತ್ತು ದೋಣಿಯ ಮೇಲಿನ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More