Karnataka Assembly Polls: ಕಲಬುರಗಿಯ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ, ಸ್ವಾಗತಿಸಿದ ಡಿಕೆ ಶಿವಕುಮಾರ್

|

Updated on: Apr 22, 2023 | 10:48 AM

ಚಿತ್ತಾಪುರದ ಮಾಜಿ ಬಿಜೆಪಿ ಶಾಸಕ ವಿಶ್ವನಾಥ್ ಪಾಟೀಲ್ ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ನೀಡಿದ್ದನ್ನು ವಿರೋಧಿಸಿದ್ದರು ಮತ್ತು ಅರವಿಂದ್ ಚೌಹಾನ್ ಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡನ್ನು ಒತ್ತಾಯಿಸಿದ್ದರು

ಬೆಂಗಳೂರು: ಕಲಬುರಗಿಯ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ (Vishwanath Patil) ಮತ್ತು ಅರವಿಂದ್ ಚೌಹಾನ್ (Aravind Chouhan) ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾನ್ ಚಿತ್ತಾಪುರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ನಿಮಗೆ ನೆನಪಿರಬಹುದು, ಚಿತ್ತಾಪುರದ ಮಾಜಿ ಬಿಜೆಪಿ ಶಾಸಕ ವಿಶ್ವನಾಥ್ ಪಾಟೀಲ್ ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ನೀಡಿದ್ದನ್ನು ವಿರೋಧಿಸಿದ್ದರು ಮತ್ತು ಅರವಿಂದ್ ಚೌಹಾನ್ ಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡನ್ನು ಒತ್ತಾಯಿಸಿದ್ದರು. ಆದರೆ, ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರಿಬ್ಬರು ಬಿಜೆಪಿ ತೊರೆದು ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ