AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rowdies in Politics: ಮದ್ದೂರು ಕ್ಷೇತ್ರದ ಇಬ್ಬರು ರೌಡಿ ಶೀಟರ್ ಗಳು ಜೆಡಿಎಸ್ ಶಾಸಕ ಡಿಸಿ ತಮ್ಮಣ್ಣ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ!

Rowdies in Politics: ಮದ್ದೂರು ಕ್ಷೇತ್ರದ ಇಬ್ಬರು ರೌಡಿ ಶೀಟರ್ ಗಳು ಜೆಡಿಎಸ್ ಶಾಸಕ ಡಿಸಿ ತಮ್ಮಣ್ಣ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 08, 2023 | 11:16 AM

Share

ಶಾಸಕ ತಮ್ಮಣ್ಣ ಅವರು ರೌಡಿಶೀಟರ್ ಗಳ ಜೊತೆ ನೂರಾರು ಯುವಕರಿಗೆ ಮಾಂಸದೂಟದ ಔತಣ ಏರ್ಪಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.

ಮಂಡ್ಯ: ಹೇಳೋದು ಆಚಾರ ತಿನ್ನೋದು ಬದನೆಕಾಯಿ ಅಂತ ನಮ್ಮಲ್ಲಿ ಹೇಳುತ್ತಾರೆ. ಜೆಡಿಎಸ್ ಪಕ್ಷದ ನಾಯಕರ ಕತೆಯೂ ಹಾಗಿದೆ. ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್ ಗಳ ಜೊತೆ ಕಾಣಿಸಿಕೊಂಡಾಗ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಜೋರು ಧ್ವನಿಯಲ್ಲಿ ಮಾತಾಡಿದ್ದು ಕನ್ನಡಿಗರಿಗೆ ಗೊತ್ತಿದೆ. ಈಗೇನಾಗಿದೆ ಅಂತ ನೋಡಿ. ಮದ್ದೂರು ಜೆಡಿಎಸ್ ಶಾಸಕ ಡಿಸಿ ತಮ್ಮಣ್ಣ (DC Thammanna) ಆವರ ಸಮ್ಮುಖದಲ್ಲಿ ಮದ್ದೂರು ಪೊಲೀಸ್ ಠಾಣೆಯ ಇಬ್ಬರು ರೌಡಿಶೀಟರ್ ಗಳಾದ ವರುಣ್ ಗೌಡ (Varun Gowda) ಮತ್ತು ಪ್ರಶಾಂತ್ (Prashanth) ಜೆಡಿಎಸ್ ಪಕ್ಷ ಸೇರಿದ್ದಾರೆ. ಶಾಸಕ ತಮ್ಮಣ್ಣ ಅವರು ರೌಡಿಶೀಟರ್ ಗಳ ಜೊತೆ ನೂರಾರು ಯುವಕರಿಗೆ ಮಾಂಸದೂಟದ ಔತಣ ಏರ್ಪಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 08, 2023 11:14 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.