ಶಿವಮೊಗ್ಗ: ಪ್ರೇಮ್ ಸಿಂಗ್ ಇರಿತ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ: ಅಲೋಕ್ ಕುಮಾರ್, ಎಡಿಜಿಪಿ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 16, 2022 | 10:58 AM

ತಪ್ಪಿತಸ್ಥರ ವಿರುದ್ಧ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಮತ್ತು ಕಾನೂನು ರೀತ್ಯಾ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನೆಲ್ಲ ಜರುಗಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದರು.

ಶಿವಮೊಗ್ಗದಲ್ಲಿ ಸೋಮವಾರ ನಡೆದ ಪ್ರೇಮ್ ಸಿಂಗ್ (Prem Singh) ಇರಿತ ಪ್ರಕರಣ ಕುರಿತು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ (Alok Kumar) ಅವರು ಮಾಧ್ಯಮದ ಜೊತೆ ಒಂದಷ್ಟು ಮಾಹಿತಿ ಹಂಚಿಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ (absconding). ಆದಷ್ಟು ಬೇಗ ಅವರನ್ನೂ ಬಂಧಿಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಮತ್ತು ಕಾನೂನು ರೀತ್ಯಾ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನೆಲ್ಲ ಜರುಗಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದರು.