Video: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕೆಲ ಗಂಟೆಗಳ ಶೋಧ ಕಾರ್ಯದ ಬಳಿಕ ಯುವಕರಿಬ್ಬರ ಶವ ಸಿಕ್ಕಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶ: ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು. ಯುವಕನ ಶವ ಸಿಕ್ಕಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
Follow Us
Latest Videos

