Video: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

Updated on: Sep 10, 2024 | 10:48 AM

ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕೆಲ ಗಂಟೆಗಳ ಶೋಧ ಕಾರ್ಯದ ಬಳಿಕ ಯುವಕರಿಬ್ಬರ ಶವ ಸಿಕ್ಕಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ಆಂಧ್ರಪ್ರದೇಶ: ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು. ಯುವಕನ ಶವ ಸಿಕ್ಕಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More