ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನಾನ್-ಪೀಕ್ ಅವರ್‌ಗಳಲ್ಲಿ ಸಿಗುವ ದರ ಅತ್ಯಂತ ಕಡಿಮೆಯಾಗಿದ್ದು, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 08: ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನಾನ್-ಪೀಕ್ ಅವರ್‌ಗಳಲ್ಲಿ ಸಿಗುವ ದರ ಅತ್ಯಂತ ಕಡಿಮೆಯಾಗಿದ್ದು, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್‌ಪಿಜಿ ಮತ್ತು ಸಿಎನ್‌ಜಿ ಇಂಧನ ಬೆಲೆಗಳು ಗಣನೀಯವಾಗಿ ಹೆಚ್ಚಾಗಿದ್ದರೂ, ಊಬರ್ ದರಗಳನ್ನು ಹೆಚ್ಚಿಸದೆ, ಬದಲಿಗೆ ಕಡಿಮೆ ಮಾಡಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಚಾಲಕರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
