AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ ಸಂಭ್ರಮ: ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ

ಉಡುಪಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ ಸಂಭ್ರಮ: ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ

ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 07, 2023 | 9:36 PM

Share

ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವವೆಂದರೆ ವೈಭವದ ಹಬ್ಬ. ಕಣ್ಮಣಿಯಾದ ಕಡಗೋಲು ಕೃಷ್ಣ ಅಷ್ಟಮಠಗಳ ರಥ ಬೀದಿಯಲ್ಲಿ ತನ್ನ ಲೀಲೋತ್ಸವಗಳನ್ಬು ತೋರಿಸುತ್ತಾ ಸಾಗಿಬಂದಾಗ ಭಕ್ತರಿಗೆ ಖುಷಿಯೋ ಖುಷಿ.

ಉಡುಪಿ, ಸೆಪ್ಟೆಂಬರ್​ 7: ಉಡುಪಿಯ ಅಷ್ಟಮಿ ಮಹೋತ್ಸವ ಜಗತ್ಪ್ರಸಿದ್ಧಿ ಪಡೆದಿದೆ. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವ (Vitlapindi Mahotsa) ವೆಂದರೆ ವೈಭವದ ಹಬ್ಬ. ಇಂದು ಚಿನ್ನದ ರಥದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಯಿತು. ಚಾತುರ್ಮಾಸ್ಯ ಕಾಲವಾದ ಕಾರಣ ಉತ್ಸವ ಮೂರ್ತಿಯನ್ನು ಹೊರ ತರುವಂತಿಲ್ಲ, ಹಾಗಾಗಿ ಅಷ್ಟಮಿಗೆಂದೇ ತಯಾರಿಸಲಾಗುವ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಅಷ್ಟಮಠಗಳ ಸುತ್ತಲೂ ರಥ ಬೀದಿಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಸಾವಿರಾರು ಭಕ್ತರು ಭಾಗವಹಿಸಿದ್ದರು. ಸಾಂಪ್ರದಾಯಿಕ ವೇಷದಾರಿ ಗೊಲ್ಲರು ಮೊಸರಿನ ಕುಡಿಕೆಗಳನ್ನು ಒಡೆಯುತ್ತಾ ಸಾಗಿದಂತೆ ಪ್ರದಕ್ಷಿಣಕಾರವಾಗಿ ಚಿನ್ನದ ರಥದಲ್ಲಿ ದೇವರ ಮೆರವಣಿಗೆ ನಡೆಯಿತು. ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಪಾದರು ಪೂಜೆ ನಡೆಸಿ, ಬಳಿಕ ರಥದ ಮುಂದೆ ಭಕ್ತರೊಡನೆ ಸಾಗಿ ಬಂದರು. ಹುಲಿ ವೇಷ ಸೇರಿದಂತೆ ಬಗೆ ಬಗೆಯ ವೇಷಧಾರಿಗಳು ಶ್ರೀ ಕೃಷ್ಣನ ಲೀಲೋತ್ಸವಕ್ಕೆ ಸಾಕ್ಷಿಯಾದರು. ಎಂಟು ಮಠಗಳ ಅಂಗಳದಲ್ಲಿ ನಿಂತ ಭಕ್ತರು ಕೃಷ್ಣ ಜಪ ಮಾಡುತ್ತಾ ಚಿನ್ನದ ರಥಕ್ಕೆ ಕೈಮುಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 07, 2023 09:35 PM