ಅಮಿತ್ ಶಾ, ಮೋದಿ ಬ್ಯಾಗನ್ನೂ ಚೆಕ್ ಮಾಡುತ್ತೀರಾ?; ಚುನಾವಣಾ ಆಯೋಗದ ಅಧಿಕಾರಿಗಳ ಜೊತೆ ಉದ್ಧವ್ ಠಾಕ್ರೆ ವಾಗ್ವಾದ
ತಮ್ಮ ಬ್ಯಾಗ್‌ಗಳನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲಿಸುವ ವಿಡಿಯೋವನ್ನು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹಂಚಿಕೊಂಡಿದ್ದಾರೆ. ಅವರು ತಮ್ಮ ಬ್ಯಾಗ್‌ಗಳನ್ನು ಪರಿಶೀಲಿಸಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಅವಕಾಶ ನೀಡುವ ಮೂಲಕ ಸಹಕರಿಸಿದ್ದಾರೆ. ಬಳಿಕ, ಇದೇ ರೀತಿ ಎಲ್ಲ ರಾಜಕೀಯ ನಾಯಕರ ಬ್ಯಾಗ್ಗಳನ್ನೂ ಪರಿಶೀಲನೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸಾರ್ವಜನಿಕ ರ್ಯಾಲಿಗಾಗಿ ಯವತ್ಮಾಲ್‌ಗೆ ಆಗಮಿಸಿದಾಗ ಅವರ ಬ್ಯಾಗ್‌ಗಳನ್ನು ಪರಿಶೀಲಿಸುವ ಕ್ರಮದ ಕುರಿತು ಇಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕಾರಿಗಳೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಾದರಿ ನೀತಿ ಸಂಹಿತೆ (MCC) ಜಾರಿಯಲ್ಲಿದೆ.
ಈ ಘಟನೆಯ ವಿಡಿಯೋ ತುಣುಕಿನ ಪ್ರಕಾರ, ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಅವರಿಗೂ ಇದೇ ರೀತಿಯ ಬ್ಯಾಗ್ ಚೆಕ್‌ಗಳನ್ನು ನಡೆಸಿದ್ದೀರಾ? ಎಂಬುದೂ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಕೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos