Loading video

ಉಡುಪಿ: ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಮಹಿಳಾ ಸಿಬ್ಬಂದಿ, ಇಲ್ಲಿದೆ ರೋಚಕ ವಿಡಿಯೋ

| Updated By: Ganapathi Sharma

Updated on: Sep 20, 2024 | 11:08 AM

ವೇಗವಾಗಿ ಚಲಿಸುತ್ತಿರುವ ರೈಲನ್ನು ಹತ್ತಲು ಹೊರಟು ಮಹಿಳಾ ಪ್ರಯಾಣಿಕರೊಬ್ಬರು ಆಯತಪ್ಪಿ ಬಿದ್ದ ಘಟನೆ ಉಡುಪಿ ರೈಲು ನಿಲ್ದಾಣದಲ್ಲಿ ನಡೆದಿದೆ. ಇದೇ ವೇಳೆ ಅವರನ್ನು ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ರೋಚಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಉಡುಪಿ, ಸೆಪ್ಟೆಂಬರ್ 20: ಆಯತಪ್ಪಿ ರೈಲಿನಡಿ ಬೀಳುತ್ತಲಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಮಹಿಳಾ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿ ರೈಲು ನಿಲ್ದಾಣದಲ್ಲಿ ನಡೆದಿದೆ. ಉಡುಪಿ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು ಮಾಡ್ಗಾಂವ್ ಪ್ಯಾಸೆಂಜರ್ ರೈಲು ನಿಲ್ದಾಣಕ್ಕೆ ಬಂದು ನಿಲ್ಲುವ ಮೊದಲೇ, ವೇಗವಾಗಿ ಸಂಚರಿಸುತ್ತಿದ್ದಾಗಲೇ ಮಹಿಳೆ ಓಡಿಹೊಗಿ ರೈಲನ್ನೇರಲು ಪ್ರಯತ್ನಿಸಿದ್ದಾರೆ. ಈ ವೇಳೆ, ಮಹಿಳೆ ಆಯತಪ್ಪಿ ಬಿದ್ದಿದ್ದಾರೆ. ಆಕೆ ಬೀಳುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಆರ್​ಪಿಎಫ್​​​ ಸಿಬ್ಬಂದಿ ಅರ್ಪಣಾ ಜೀವದ ಹಂಗು ತೊರೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಆರ್​ಪಿಎಫ್​​​ ಸಿಬ್ಬಂದಿ ಅರ್ಪಣಾ ಸಾಹಸಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿಯಿಂದ ಹಾಗೂ ಪ್ರಯಾಣಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ