AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jun 14, 2026 | 9:54 PM

Share

ಅನಂತ್ ಅಂಬಾನಿ ಅವರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉದ್ಯಮಿ ಮುಕೇಶ್ ಅಂಬಾನಿಯವರ ಪುತ್ರ ಅನಂತ್, ತಮ್ಮ ಕುಟುಂಬದ ಗುರೂಜಿಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ದೇಗುಲದ ವತಿಯಿಂದ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಭಕ್ತಿಯಿಂದ ಗಣಪತಿ ಪ್ರಾರ್ಥನೆಯೊಂದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಇತ್ತೀಚೆಗೆ ಕೇರಳದ ಪ್ರಮುಖ ದೇವಾಲಯಗಳು ಸೇರಿದಂತೆ ದೇಶದ ಹಲವೆಡೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇದೀಗ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ. ಇನ್ನು ಇತ್ತೀಚೆಗೆ ತಮಿಳುನಾಡು ಸಿಎಂ ವಿಜಯ್ ಕೂಡ  ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More