ಉಡುಪಿಯಲ್ಲಿ ಶೂಟೌಟ್: ಕಾಂಗ್ರೆಸ್ ಮುಖಂಡನ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Aug 07, 2026 | 10:43 PM

ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್​​​ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್​​​ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್​​ ಏರಿ ಪರಾರಿಯಾಗಿದ್ದಾನೆ.

ಉಡುಪಿ, (ಆಗಸ್ಟ್ 07): ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್​​​ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್​​​ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್​​ ಏರಿ ಪರಾರಿಯಾಗಿದ್ದಾನೆ. ಇನ್ನು ಈ ಶೂಟ್​ ಔಟ್ ಬಗ್ಗೆ ಎಸ್ಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More