AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಕೊಟ್ಟ ಮಳೆ, ನಷ್ಟದಲ್ಲಿ ಭತ್ತದ ಕೃಷಿ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!

ಕೈಕೊಟ್ಟ ಮಳೆ, ನಷ್ಟದಲ್ಲಿ ಭತ್ತದ ಕೃಷಿ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 07, 2026 | 2:27 PM

Share

ಉಡುಪಿ ಕರಾವಳಿ ಜಿಲ್ಲೆಯಲ್ಲಿ ಈ ಬಾರಿ ಶೇ 40ರಷ್ಟು ಮಳೆ ಕೊರತೆಯಿಂದ ಭತ್ತದ ಇಳುವರಿ ಕುಸಿದಿದೆ. ಆದಾಯ ಕಡಿಮೆಯಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ನೀರಿಗಾಗಿ ಟ್ಯಾಂಕರ್‌ಗಳಿಗೆ ಹೆಚ್ಚು ಹಣ ಪಾವತಿಸಬೇಕಾದ ಸ್ಥಿತಿ ಎದುರಾಗಿದೆ. ಕೃಷಿ ಮಾತ್ರವಲ್ಲದೆ, ತೀವ್ರ ಬಿಸಿಲಿನಿಂದ ಮೀನುಗಾರಿಕೆಗೂ ತೊಂದರೆಯಾಗುತ್ತಿದ್ದು, ಸರ್ಕಾರ ಬೆಂಬಲ ಬೆಲೆ ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ.

ಉಡುಪಿ, ನವೆಂಬರ್ 07: ಜಿಲ್ಲೆಯಲ್ಲಿ ಈ ವರ್ಷ ಶೇಕಡ 40ರಷ್ಟು ಮಳೆ ಕೊರತೆಯಾಗಿದ್ದು, ಭತ್ತದ ಕೃಷಿ ನಷ್ಟಕ್ಕೆ ಸಿಲುಕಿದೆ. ಮಳೆಯ ಪ್ರಮಾಣ ಕಡಿಮೆಯಾಗಿರುವ ಕಾರಣ ಭತ್ತದ ಇಳುವರಿ ಗಣನೀಯವಾಗಿ ಕುಸಿದಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಕಟಾವಿಗೆ ಬರುವ ಭತ್ತದಿಂದ ಸರಿಯಾದ ಆದಾಯ ಸಿಗದೆ ರೈತರು ಕಂಗಾಲಾಗಿದ್ದಾರೆ.

ಒಂದು ಎಕರೆಯಲ್ಲಿ ಭತ್ತ ಬೆಳೆದರೆ ಲಾಭ ಗಳಿಸುತ್ತಿದ್ದ ರೈತರು, ಈಗ ಸಂಪೂರ್ಣ ನಷ್ಟ ಅನುಭವಿಸುತ್ತಿದ್ದಾರೆ. ಮಳೆಯ ಅಭಾವದಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಕೃಷಿಗೆ ಟ್ಯಾಂಕರ್‌ ನೀರನ್ನು ಅವಲಂಬಿಸಿದರೆ, ಒಂದು ಟ್ಯಾಂಕರ್‌ಗೆ ಸುಮಾರು 3,000 ರೂಪಾಯಿ ವೆಚ್ಚವಾಗುತ್ತದೆ. ಇದು ರೈತರ ಆದಾಯಕ್ಕೆ ಹೊರೆಯಾಗಲಿದೆ. ಕೃಷಿ ಚಟುವಟಿಕೆಗಳಲ್ಲದೆ, ಅಕಾಲಿಕ ಉರಿ ಬಿಸಿಲಿನಿಂದಾಗಿ ಮೀನುಗಾರಿಕೆಗೂ ತೊಂದರೆಯಾಗುವ ಲಕ್ಷಣಗಳು ಗೋಚರಿಸಿವೆ.

ಸಾಲ ಮಾಡಿ ಕೃಷಿ ಮಾಡಿದ ರೈತರಿಗೆ ಬೆಂಬಲ ಬೆಲೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕೃಷಿ ಮತ್ತು ಮೀನುಗಾರಿಕೆ ಎರಡೂ ಕರಾವಳಿಯ ಪ್ರಮುಖ ಆದಾಯ ಮೂಲಗಳಾಗಿದ್ದು, ಇವೆರಡಕ್ಕೂ ಪೆಟ್ಟು ಬೀಳುವ ಸಾಧ್ಯತೆ ಇರುವುದರಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More