Udupi: ಸುರಿಯುವ ಮಳೆಯಲ್ಲಿ ತೊಂದರೆಪೀಡಿತ ಮೀನುಗಾರರಲ್ಲಿಗೆ ಹೋಗಿ ಪರಿಹಾರ ಒದಗಿಸುವ ಭರವಸೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 08, 2023 | 4:40 PM

ಮೀನುಗಾರ ಕುಟುಂಬಗಳ ಸದಸ್ಯರು ಸಚಿವೆಯ ಬಳಿ ತಮ್ಮ ಕಷ್ಟ ಹೇಳಿಕೊಂಡರು. ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಅಧಿಕಾರಿಗಳೂ ಇದ್ದರು.

ಉಡುಪಿ: ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಮ್ಮ ಜವಾಬ್ದಾರಿಗಳ ಕಡೆ ತೋರುತ್ತಿರುವ ಬದ್ಧತೆ ಅನುಕರಣೀಯ. ಉಡುಪಿ ಪ್ರವಾಸದಲ್ಲಿರುವ ಅವರು ಮಳೆ ಸುರಿಯುತ್ತಿದ್ದರೂ ತೊಂದರೆಗೊಳಗಾಗಿರುವ ಮೀನುಗಾರ ಕುಟುಂಬಗಳನ್ನು (fishermen family) ಭೇಟಿ ಮಾಡಿ ಸಹಾಯ ಮಾಡುವ ಆಶ್ವಾಸನೆ ನೀಡಿದರು. ಉಡಪಿಯಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಮೀನುಗಾರ ಸಮುದಾಯದವರ ಶೆಡ್ ಗಳು (sheds) ಕುಸಿದುಬಿದ್ದಿವೆ. ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೊಂದರೆಗ್ರಸ್ಥ ಕುಟುಂಬಗಳ ಸ್ಥಳಗಳಿಗೆ ತೆರಳಿ ಅವರಿಗೆ ಸಮಾಧಾನ ಹೇಳಿದರಲ್ಲದೆ, ಪರಿಹಾರ ಒದಗಿಸುವುದಾಗಿ ಹೇಳಿದರು. ಮೀನುಗಾರ ಕುಟುಂಬಗಳ ಸದಸ್ಯರು ಸಚಿವೆಯ ಬಳಿ ತಮ್ಮ ಕಷ್ಟ ಹೇಳಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.