ಮಗ ಕಾಂತೇಶ್ ಕೋರ್ಟ್​ನಿಂದ ತಡೆಯಾಜ್ಞೆಗೆ ತಂದೆ ಈಶ್ವರಪ್ಪ ಸ್ಪಷ್ಟನೆ

Updated By: ಗಂಗಾಧರ​ ಬ. ಸಾಬೋಜಿ

Updated on: May 01, 2024 | 6:07 PM

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೇಗಾದರೂ ಮಾಡಿ ನಮ್ಮನ್ನು ಹಿಂದೆ ಸರಿಸಬೇಕೆಂಬ ಪ್ರಯತ್ನ ನಡೀತಿದೆ. ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ, ಅದು ಬಿಟ್ಟು ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಉಡುಪಿ, ಮೇ 1: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಕೆಎಸ್ ಈಶ್ವರಪ್ಪ (KS Eshwarappa) ಪುತ್ರ ಕಾಂತೇಶ್​ಗೂ (kanthesh) ಕೂಡ ಅಶ್ಲೀಲ ಸಿಡಿ ಭೀತಿ ಶುರುವಾಗಿತ್ತು. ಹೀಗಾಗಿ ನಿನ್ನೆ ಅವರು ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಜಿಲ್ಲೆಯ ಬೈಂದೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೇಗಾದರೂ ಮಾಡಿ ನಮ್ಮನ್ನು ಹಿಂದೆ ಸರಿಸಬೇಕೆಂಬ ಪ್ರಯತ್ನ ನಡೀತಿದೆ. ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ, ಅದು ಬಿಟ್ಟು ಬೇರೇನೂ ಇಲ್ಲ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರವಾಗಿ ಮಾತನಾಡಿದ್ದು, ಅದು ದರಿದ್ರ ಸಬ್ಜೆಕ್ಟ್ ನಾವ್ಯಾಕೆ ಮಾತನಾಡೋಣ. ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ. ದೇಶಾದ್ಯಂತ ಜನ ಛೀ.. ಥೂ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.