ಉಡುಪಿ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ: ಶ್ರೀಗಳ ಕೈಯಿಂದ ಬಿದ್ದ ಕೃಷ್ಣನ ಮೂರ್ತಿ
ಉಡುಪಿ ವಿಟ್ಲಪಿಂಡಿ ಉತ್ಸವದ ರಥೋತ್ಸವದ ವೇಳೆ ಮಹತ್ವದ ಅವಘಡ ಸಂಭವಿಸಿದೆ. ಪರ್ಯಾಯ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಕೈಯಿಂದ ಕೃಷ್ಣನ ಮಣ್ಣಿನ ಮೂರ್ತಿಯು ಕೆಳಗೆ ಬಿದ್ದು ಭಗ್ನಗೊಂಡಿದೆ. ಲಕ್ಷಾಂತರ ಭಕ್ತರು ಸೇರಿದ್ದ ಈ ಉತ್ಸವದಲ್ಲಿ ನಡೆದ ಅನಿರೀಕ್ಷಿತ ಘಟನೆಯಿಂದ ಭಕ್ತರಲ್ಲಿ ತೀವ್ರ ಆತಂಕ ಉಂಟಾಗಿದ್ದು, ಕೃಷ್ಣ ಮಠದಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದೆ.
ಉಡುಪಿ, ಸೆಪ್ಟೆಂಬರ್ 06: ಚಾತುರ್ಮಾಸದ ಹಿನ್ನೆಲೆಯಲ್ಲಿ ನಿನ್ನೆ ಕೃಷ್ಣ ಮಠದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ವಿಟ್ಲಪಿಂಡಿ ರಥೋತ್ಸವದ ವೇಳೆ ಅವಘಡವೊಂದು ಸಂಭವಿಸಿದೆ. ರಥಾರೋಹಣ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಕೈಯಿಂದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಉತ್ಸವ ಮೂರ್ತಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಭಗ್ನಗೊಂಡಿದೆ. ಉತ್ಸವದ ಸಂದರ್ಭದಲ್ಲಿ ಈ ಅನಿರೀಕ್ಷಿತ ಘಟನೆ ನಡೆದಿರುವುದು ನೆರೆದಿದ್ದ ಅಪಾರ ಸಂಖ್ಯೆಯ ಕೃಷ್ಣ ಭಕ್ತರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

