ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ಯುಗಾದಿ ಹಬ್ಬದ ಪ್ರಯುಕ್ತ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಗ್ರಾಮದ ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಆಚರಿಸಲಾಯಿತು. ಕಳಶದಲ್ಲಿ ನೀರು ತುಂಬಿಕೊಂಡು ಹೆಣ್ಣು ಮಕ್ಕಳು ತಲೆ ಮೇಲೆ ಹೊತ್ತು ವಾದ್ಯಗೋಷ್ಠಿ ಮೂಲಕ ಮೆರವಣಿಗೆ ನಡೆಸಲಾಯಿತು. ದೇವಾಲಯದ ಮುಂಭಾಗದಲ್ಲಿರುವ ಕೊಳದಲ್ಲಿ ಪೂಜೆ ನೆರವೇರಿಸಲಾಯಿತು.
ಮೈಸೂರು, ಮಾರ್ಚ್ 31: ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ ಎಂದು ನಂಜನಗೂಡು ನಂಜುಂಡೇಶ್ವರ ದೇವಾಲಯದ ಓಕುಳಿ ಉತ್ಸವದ ಸಂದರ್ಭ ಪ್ರಾರ್ಥನೆ ನೆರವೆರಿಸಲಾಯಿತು. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಗ್ರಾಮದ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಭಾನುವಾರ ಓಕುಳಿ ಉತ್ಸವ ಸಂಭ್ರಮದಿಂದ ನೆರವೇರಿತು. ಉತ್ಸವದ ವಿಡಿಯೋ ಇಲ್ಲಿದೆ.