Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ

ವಿವೇಕ ಬಿರಾದಾರ
|

Updated on: Mar 30, 2025 | 3:20 PM

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಯುಗಾದಿ, ರಂಜಾನ್ ಹಬ್ಬ ಮತ್ತು ಹನುಮಾನ್ ಜಯಂತಿಯ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳದಿಂದ ತೀವ್ರ ಪರಿಶೀಲನೆ ನಡೆಯಿತು. ರೈಲ್ವೆ ನಿಲ್ದಾಣ, ಚೆನ್ನಪಟ್ಟಣ ಹನುಮಾನ್ ದೇವಸ್ಥಾನ ಮುಂತಾದ ಸ್ಥಳಗಳಲ್ಲಿ ಈ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.

ಯುಗಾದಿ, ರಂಜಾನ್ ಹಬ್ಬ ಹಾಗೂ ಹನುಮಾನ್ ದೇವರ ಜಾತ್ರೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು. ಭಟ್ಕಳದ ರೈಲ್ವೆ ನಿಲ್ದಾಣ, ಚೆನ್ನಪಟ್ಟಣ ಹನುಮಾನ್ ದೇವಸ್ಥಾನ ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್​ ದಳ ಪರಿಶೀಲನೆ ನಡೆಸಿತು. ಯಾವುದೇ ಅವಘಡ ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆ‌ಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.