ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಈಗ ಭಾವುಕ ಸಂಚಿಕೆಗಳು ಪ್ರಸಾರ ಆಗುತ್ತಿವೆ. ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬರುತ್ತಿದ್ದಾರೆ. ಉಗ್ರಂ ಮಂಜು ತಂದೆ ಸಹ ಬಿಗ್ ಬಾಸ್ ಮನೆಗೆ ಬಂದಿದ್ದು, ಅವರನ್ನು ನೋಡಿ ಮಂಜು ಅತ್ತಿದ್ದಾರೆ. ಮಗನಿಗೆ ತಂದೆ ಧೈರ್ಯ ತುಂಬಿದ್ದಾರೆ. ಜ.1ರಂದು ಈ ಎಮೋಷನಲ್ ಎಪಿಸೋಡ್ ಪ್ರಸಾರ ಆಗಲಿದೆ.
ಉಗ್ರಂ ಮಂಜು ಅವರು ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸುತ್ತಾರೆ. ಆದರೆ ಫ್ಯಾಮಿಲಿ ವಿಚಾರಕ್ಕೆ ಬಂದರೆ ಅವರು ಸಖತ್ ಎಮೋಷನಲ್. ಜನವರಿ 1ರ ಸಂಚಿಕೆಯಲ್ಲಿ ಬಿಗ್ ಬಾಸ್ ಮನೆಗೆ ಉಗ್ರಂ ಮಂಜು ಅವರ ಕುಟುಂಬದವರು ಬಂದಿದ್ದಾರೆ. ತಂದೆಯ ಮುಖ ನೋಡುತ್ತಿದ್ದಂತೆಯೇ ಮಂಜು ಗಳಗಳನೆ ಅಳಲು ಆರಂಭಿಸಿದ್ದಾರೆ. ಅವರು ಸಿಕ್ಕಾಪಟ್ಟೆ ಎಮೋಷನಲ್ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos