ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

Updated on: Jan 01, 2025 | 3:24 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಈಗ ಭಾವುಕ ಸಂಚಿಕೆಗಳು ಪ್ರಸಾರ ಆಗುತ್ತಿವೆ. ಬಿಗ್​ ಬಾಸ್ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬರುತ್ತಿದ್ದಾರೆ. ಉಗ್ರಂ ಮಂಜು ತಂದೆ ಸಹ ಬಿಗ್ ಬಾಸ್ ಮನೆಗೆ ಬಂದಿದ್ದು, ಅವರನ್ನು ನೋಡಿ ಮಂಜು ಅತ್ತಿದ್ದಾರೆ. ಮಗನಿಗೆ ತಂದೆ ಧೈರ್ಯ ತುಂಬಿದ್ದಾರೆ. ಜ.1ರಂದು ಈ ಎಮೋಷನಲ್ ಎಪಿಸೋಡ್​ ಪ್ರಸಾರ ಆಗಲಿದೆ.

ಉಗ್ರಂ ಮಂಜು ಅವರು ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸುತ್ತಾರೆ. ಆದರೆ ಫ್ಯಾಮಿಲಿ ವಿಚಾರಕ್ಕೆ ಬಂದರೆ ಅವರು ಸಖತ್ ಎಮೋಷನಲ್. ಜನವರಿ 1ರ ಸಂಚಿಕೆಯಲ್ಲಿ ಬಿಗ್ ಬಾಸ್ ಮನೆಗೆ ಉಗ್ರಂ ಮಂಜು ಅವರ ಕುಟುಂಬದವರು ಬಂದಿದ್ದಾರೆ. ತಂದೆಯ ಮುಖ ನೋಡುತ್ತಿದ್ದಂತೆಯೇ ಮಂಜು ಗಳಗಳನೆ ಅಳಲು ಆರಂಭಿಸಿದ್ದಾರೆ. ಅವರು ಸಿಕ್ಕಾಪಟ್ಟೆ ಎಮೋಷನಲ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More