150 ರೂಪಾಯಿಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ಸಿಕ್ತು ದೊಡ್ಡ ಸಂಭಾವನೆ

Edited By:

Updated on: Jan 28, 2025 | 3:03 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಫಿನಾಲೆ ತಲುಪಿದ್ದ ಉಗ್ರಂ ಮಂಜು ಅವರು 4ನೇ ರನ್ನರ್​ ಅಪ್​ ಆದರು. ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಿಲ್ಲ. 119 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಮನರಂಜನೆ ನೀಡಿದ ಅವರಿಗೆ ‘ಕಲರ್ಸ್ ಕನ್ನಡ’ದಿಂದ ದೊಡ್ಡ ಸಂಭಾವನೆಯೇ ಸಿಕ್ಕಿರುತ್ತದೆ. ಆ ಕುರಿತು ಪ್ರಶ್ನೆ ಕೇಳಲಾಗಿದೆ.

ನಟ ಉಗ್ರಂ ಮಂಜು ಅವರು ಅಂದಾಜು 200 ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಲನ್ ಆಗಿ ಅವರು ಗುರುತಿಸಿಕೊಂಡಿದ್ದಾರೆ. ಆರಂಭದ ದಿನಗಳಲ್ಲಿ ಅವರು 150 ರೂಪಾಯಿಗೆ ಕೂಡ ಕೆಲಸ ಮಾಡಿದ್ದರು. ನಂತರ ಸಂಭಾವನೆ ಹೆಚ್ಚುತ್ತಾ ಹೋಯಿತು. ಬಿಗ್ ಬಾಸ್ ಶೋನಿಂದ ಅವರಿಗೆ ಉತ್ತಮ ಸಂಭಾವನೆ ಸಿಕ್ಕಿದೆ. ಆದರೆ ಈ ಸಂಖ್ಯೆಯನ್ನು ಬಹಿರಂಗ ಮಾಡಲು ಅವರಿಗೆ ಇಷ್ಟ ಇಲ್ಲ. ಹಾಗಾಗಿ ಸಂಭಾವನೆ ಕುರಿತ ಪ್ರಶ್ನೆಗೆ ಉಗ್ರಂ ಮಂಜು ಉತ್ತರ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 28, 2025 03:01 PM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More