UI Teaser: ಉಪ್ಪಿ ಅಭಿಮಾನಿಗಳ ಎದುರು ‘ಯುಐ’ ಟೀಸರ್​ ಬಿಡುಗಡೆ; ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Updated on: Sep 18, 2023 | 5:15 PM

UI Movie Teaser Release Live Video: ಊರ್ವಶಿ ಚಿತ್ರಮಂದಿರದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಫ್ಯಾನ್ಸ್​ ಎದುರಿನಲ್ಲಿ ‘ಯುಐ’ ಟೀಸರ್​ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಉಪೇಂದ್ರ ನಿರ್ದೇಶನ ಮಾಡಿರುವುದರಿಂದ ಸಿನಿಪ್ರಿಯರಲ್ಲಿ ಸಖತ್​ ನಿರೀಕ್ಷೆ ಮೂಡಿದೆ. ಬಹಳ ಗ್ರ್ಯಾಂಡ್​ ಆಗಿ ಟೀಸರ್​ ರಿಲೀಸ್​ ಕಾರ್ಯಕ್ರಮ ಮಾಡಲಾಗುತ್ತಿದೆ. ಇದರ ಲೈವ್​ ವಿಡಿಯೋ ಇಲ್ಲಿದೆ...

ನಟ, ನಿರ್ದೇಶಕ ಉಪೇಂದ್ರ (Upendra) ಅವರು ಇಂದು (ಸೆಪ್ಟೆಂಬರ್​ 18) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರಿಗೆ ಜನ್ಮದಿನ ವಿಶೇಷವಾಗಿದೆ. ಅಭಿಮಾನಿಗಳ ಜೊತೆಯಲ್ಲಿ ಬರ್ತ್​ಡೇ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಇದರ ಜೊತೆಗೆ ‘ಯುಐ’ ಸಿನಿಮಾದ ಟೀಸರ್​ (UI Movie Teaser) ಬಿಡುಗಡೆ ಆಗುತ್ತಿದೆ. ಅದಕ್ಕಾಗಿ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ (Urvashi Theatre) ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಫ್ಯಾನ್ಸ್​ ಎದುರಿನಲ್ಲಿ ಈ ಟೀಸರ್​ ಬಿಡುಗಡೆ ಆಗುತ್ತಿದೆ. ‘ಯುಐ’ ಸಿನಿಮಾಗೆ ಉಪೇಂದ್ರ ನಿರ್ದೇಶನ ಮಾಡಿರುವುದರಿಂದ ಸಿನಿಪ್ರಿಯರಲ್ಲಿ ಸಖತ್​ ನಿರೀಕ್ಷೆ ಮೂಡಿದೆ. ಬಹಳ ಗ್ರ್ಯಾಂಡ್​ ಆಗಿ ಟೀಸರ್​ ರಿಲೀಸ್​ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More