ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

Edited By:

Updated on: Feb 08, 2026 | 1:50 PM

ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವುದನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಜೆಡಿಎಸ್‌ನಲ್ಲಿ ಇದ್ದುಕೊಂಡು ಹೀಗೆ ಮಾಡುವುದು ನಗೆಪಾಟಲಿಗೀಡಾಗುತ್ತದೆ ಎಂದು ಹೇಳಿದರು. ಒಂದು ನಿಷ್ಠೆ ಮತ್ತು ನಿಯತ್ತು ಇರಬೇಕು ಎಂದು ಜಿಟಿಡಿಗೆ ಅವರು ತಿವಿದಿದ್ದಾರೆ.

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ ಅಭ್ಯರ್ಥಿಗಳು ಇದ್ದಾರೆ. ಬಹಳಷ್ಟು ಜನರನ್ನು ಬೆಳೆಸಿದ್ದೇವೆ, ಮೆರೆಸಿದ್ದೇವೆ ಎಂದು ಹೇಳಿಕೊಳ್ತಾರೆ. ಯಾವಾಗ ಯಾರನ್ನು ಮೆರೆಸುತ್ತಾರೋ ಯಾರಿಗೆ ಗೊತ್ತು. ಈಗ ಯಾರೋ ಒಬ್ಬರನ್ನು ಮೆರೆಸಲು ಜಿಟಿಡಿ ಹೊರಟಿದ್ದಾರೆ. ಜಿ.ಟಿ. ದೇವೇಗೌಡಗೆ ನಿಯತ್ತು ಏನಾದಾರೂ ಇದೆಯಾ? ಚಾಮುಂಡೇಶ್ವರಿ ಕ್ಷೇತ್ರಕ್ಕೂ ನನಗೂ ಭಾವನಾತ್ಮಕ ಸಂಬಂಧ ಇದೆ. ಮುಂಡೇಶ್ವರಿ ಕ್ಷೇತ್ರದಲ್ಲಿ ಯಾರನ್ನೇ ಅಭ್ಯರ್ಥಿ ಮಾಡಿದ್ರೂ ಗೆಲ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 08, 2026 01:49 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More