ಬೆಂಗಳೂರಿನಲ್ಲಿ ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್

Updated on: Nov 05, 2024 | 10:27 PM

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದುಕೊಂಡರು.

ಬೆಂಗಳೂರು, (ನವೆಂಬರ್ 05): ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಾಕ್ ಹಾಗೂ ಅವರ ಪತ್ನಿ ಅಕ್ಷತಾ ಮೂರ್ತಿಯವರು ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ, ಇನ್ಫೋಸಿಸ್ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ, ಅವರ ಪತ್ನಿ ಸುಧಾಮೂರ್ತಿ ಸಹ ಹಾಜರಿದ್ದರು. ಇಂದು(ನವೆಂಬರ್ -5_ ಸಂಜೆ 6 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ರಿಷಿ ಸುನಾಕ್ ದಂಪತಿ ಹಾಗೂ ನಾರಾಯಣ ಮೂರ್ತಿ ದಂಪತಿಯು ಸುಮಾರು ಅರ್ಧ ಗಂಟೆಗಳ ಕಾಲ ಮಠದಲ್ಲಿದ್ದರು. ಮೊದಲಿಗೆ ವಿಶೇಷ ಪೂಜೆ ನೆರವೇರಿಸಿದ ಅವರು, ಮಂಗಳಾರತಿ, ತೀರ್ಥ, ರಾಯರ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಇದೇ ವೇಳೆ ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪಗಳನ್ನು ಬೆಳಗಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More