ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು

Edited By:

Updated on: Jul 17, 2026 | 6:18 PM

ಮಂಗಳೂರಿನ ಉಳ್ಳಾಲ ಕಡಲತೀರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಆಳ ಸಮುದ್ರದಲ್ಲಿ ಸಂಚರಿಸುತ್ತಿದ್ದ ಬೃಹತ್ ಬೂತಾಯಿ ಮೀನುಗಳ ಹಿಂಡು, ನಾಡದೋಣಿಯೊಂದರಿಂದ ಹೆದರಿ, ಅಲೆಗಳ ರಭಸಕ್ಕೆ ಸಿಲುಕಿ ದಡಕ್ಕೆ ಬಂದು ಬಿದ್ದಿವೆ. ಲಕ್ಷಾಂತರ ಸಂಖ್ಯೆಯ ಜೀವಂತ ಮೀನುಗಳು ಮರಳಿನ ಮೇಲೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಮತ್ತು ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದು, ಮುಗಿಬಿದ್ದು ಮೀನುಗಳನ್ನು ಸಂಗ್ರಹಿಸಿದ್ದಾರೆ. ಈ ಘಟನೆ ಭಾರೀ ಕುತೂಹಲ ಮೂಡಿಸಿದೆ.

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ. ಇಂದು ಕೂಡ ಇಂತಹದ್ದೇ ಒಂದು ಬೃಹತ್ ಗುಂಪು ಸಾಗುತ್ತಿರುವಾಗ, ಆಕಸ್ಮಿಕವಾಗಿ ನಾಡದೋಣಿಯೊಂದು ಆ ಮೀನುಗಳ ಹಿಂಡಿಗೆ ಅಡ್ಡ ಬಂದಿದೆ. ಇದರಿಂದ ಹೆದರಿದ ಮೀನುಗಳ ಹಿಂಡು ದಿಕ್ಕು ತಪ್ಪಿ ತನ್ನ ಪಥವನ್ನು ಬದಲಾಯಿಸಿ ದಡದ ಕಡೆಗೆ ಮುಖ ಮಾಡಿದೆ. ಇದೇ ವೇಳೆ ಕಡಲಿನಲ್ಲಿ ಎದ್ದ ದೊಡ್ಡ ಅಲೆಗಳು ಈ ಮೀನಿನ ಗುಂಪಿನ ಮೇಲೆ ಅತ್ಯಂತ ಜೋರಾಗಿ ಅಪ್ಪಳಿಸಿದೆ. ಅಲೆಗಳ ರಭಸಕ್ಕೆ ಸಿಲುಕಿದ ಇಡೀ ಮೀನಿನ ಸಮೂಹವು ಒಮ್ಮೆಗೇ ಉಳ್ಳಾಲ ಕಡಲತೀರದ ದಡಕ್ಕೆ ಬಂದು ಬಿದ್ದಿದೆ.ಅಲೆಗಳ ರಭಸಕ್ಕೆ ದಡದ ಮರಳಿನ ಮೇಲೆ ಬಂದು ಬಿದ್ದ ಮೀನುಗಳಿಗೆ ವಾಪಾಸ್ ನೀರಿಗೆ ಹೋಗಲು ಸಾಧ್ಯವಾಗದೆ ತೀರದಲ್ಲೇ ಸಿಲುಕಿಕೊಂಡಿವೆ. ಕಡಲತೀರದಲ್ಲಿ ಜೀವಂತ ಬೂತಾಯಿ ಮೀನುಗಳು ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಉಳ್ಳಾಲದ ಸುತ್ತಮುತ್ತಲಿನ ನೂರಾರು ಜನರು ತೀರದ ಕಡೆಗೆ ಓಡೋಡಿ ಬಂದಿದ್ದಾರೆ. ಜನ ಕೈಗೆ ಸಿಕ್ಕ ಬಕೆಟ್‌ಗಳು, ಪ್ಲಾಸ್ಟಿಕ್ ಚೀಲಗಳು ಹಾಗೂ ಬುಟ್ಟಿಗಳನ್ನು ಹಿಡಿದುಕೊಂಡು ಮುಗಿಬಿದ್ದು ಮೀನುಗಳನ್ನು ತುಂಬಿಸಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More