ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ; ಪ್ರತಿಭಟನಾ ನಿರತರು ಖಾಕಿ ವಶಕ್ಕೆ

Edited By:

Updated on: Apr 28, 2026 | 7:01 PM

ಬೆಂಗಳೂರಿನಲ್ಲಿ ನಡೆದ ಉಮರ್ ಖಲೀದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ದೊಮ್ಮಲೂರಿನ ಬಿಐಸಿಯಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪೊಲೀಸರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಕ್ರಮ ನಿಗದಿಯಂತೆ ನಡೆದಿದ್ದು, ಪೂರ್ವ-ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಬೆಂಗಳೂರು, ಏಪ್ರಿಲ್​​ 28: ದೊಮ್ಮಲೂರು ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಉಮರ್ ಖಲೀದ್ ಅಂಡ್ ಹಿಸ್ ವರ್ಲ್ಡ್ ಪುಸ್ತಕ ಸಂಬಂಧ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಆರೋಪಿಯಾಗಿರುವ ಉಮರ್ ಖಲೀದ್ ಕುರಿತ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬಿಜೆಪಿ ಒತ್ತಾಯಿಸಿತ್ತು. ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಕಾರ್ಯಕ್ರಮ ಆರಂಭವಾಗುವ ಒಂದು ಗಂಟೆ ಮುನ್ನವೇ ಪೊಲೀಸರು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.  ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹ, ಜಾನಕಿ ನಾಯರ್ ಸೇರಿದಂತೆ ಹಲವು ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಕಾರ್ಯಕ್ರಮಕ್ಕೆ ಪೂರ್ವ-ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Apr 28, 2026 07:00 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More